ಬೆಂಗಳೂರು: ಗೌರಿ ಗಣೇಶದ ಹಬ್ಬದ ಹೊತ್ತಲ್ಲೇ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದ ಬಹುತೇಕ ಭಾಗದಲ್ಲಿ ಭಾರಿ ಮಳೆಯ ಕಾರಣ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳವಾರದಿಂದ ಮೂರು ದಿನಗಳ ಕಾಲ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.