ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯ ಎರಡು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಹಾಸನ, ಚಾಮರಾಜನಗರ, ಮಂಡ್ಯ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ನವೆಂಬರ್ 2ರಂದು 6ರಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಳಿದಂತೆ ರಾಜ್ಯದ್ಯಂತ ಮುಂದಿನ ಎರಡು ಮೂರು ದಿನ ಅಲ್ಲಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ನವೆಂಬರ್ 5ರ ನಂತರ ಮಳೆ ಸಂಪೂರ್ಣವಾಗಿ ಕಡಿಮೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.