alex Certify ಮುಂಗಾರು ಪ್ರಬಲ: ಭಾರೀ ಮಳೆ ಹಿನ್ನಲೆ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರು ಪ್ರಬಲ: ಭಾರೀ ಮಳೆ ಹಿನ್ನಲೆ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂಗಾರು ಚುರುಕುಕೊಳ್ಳುತ್ತಿದ್ದು, ಸೋಮವಾರ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂನ್ 20ರಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನ ಬೀದರ್, ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂನ್ 21 ರಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...