
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮೇ 6 ರವರೆಗೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇ 4 ರಿಂದ 6 ರವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.