alex Certify ರಾಜ್ಯದ ಹಲವೆಡೆ ಮಳೆ ಬಿರುಸು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಮಳೆ ಬಿರುಸು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಶುಕ್ರವಾರ ರಾತ್ರಿ ಮತ್ತು ಶನಿವಾರ ಯಾದಗಿರಿ, ಶಿವಮೊಗ್ಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಭಾಗದಲ್ಲಿ ಮಳೆಯಾಗಿದೆ.

ಆಗಸ್ಟ್ 18 ರಿಂದ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ವಿಜಯಪುರ, ಯಾದಗಿರಿ, ಕಲಬುರಗಿ, ಕೊಪ್ಪಳ, ಬೆಳಗಾವಿ, ಧಾರವಾಡ, ಬೀದರ್, ತುಮಕೂರು, ಗದಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 20ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 18 ರಿಂದ 21 ರವರೆಗೆ ಉತ್ತರ ಕರ್ನಾಟಕ ಭಾಗದ ಹಲವು ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವ ಇದೆ. ಆ. 22ರಿಂದ ರಾಜ್ಯದಲ್ಲಿ ಮಳೆ ಇಳಿಮುಖವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...