alex Certify ಗಮನಿಸಿ…! 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಂಭವ ಇದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಪೂರ್ವ ದಿಕ್ಕಿನಿಂದ ತೇವಾಂಶ ಭರಿತ ಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ದಕ್ಷಿಣ ಒಳನಾಡಿನ ಹಾಸನ, ಕರಾವಳಿಯ ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

10 ಜಿಲ್ಲೆಗಳಲ್ಲಿ ಹಿಂಗಾರು ಮಳೆ ಆರ್ಭಟಿಸಿದೆ. ಬೆಂಗಳೂರು, ಹಾಸನ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾದ ವರದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...