ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜೂನ್ 9 ರಿಂದ ಮೂರು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ. 9 ರಿಂದ 11ರವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಆಗಲಿದೆ. ಜೂನ್ 10 ರಂದು ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಜೂನ್ 11 ರಂದು ಹೆಚ್ಚಿನ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.