alex Certify ಗಮನಿಸಿ…! 13 ಜಿಲ್ಲೆಗಳಲ್ಲಿ ಮೇ 25 ರವರೆಗೆ ಮಳೆ, ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! 13 ಜಿಲ್ಲೆಗಳಲ್ಲಿ ಮೇ 25 ರವರೆಗೆ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೇ 25 ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶುಕ್ರವಾರ ಅನೇಕ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮೇ 25 ರವರೆಗೆ ಮಳೆ ಮುಂದುವರೆಯಲಿದೆ.

ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಮೇ 22 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 26ರವರೆಗೆ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...