ಬೆಂಗಳೂರು: ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಟ್ರಫ್ ಇರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಜೂನ್ 6 ರವರೆಗೆ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇಂದು ಮತ್ತು ನಾಳೆ ಭಾರೀ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 5 ರವರೆಗೆ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಅದೇ ರೀತಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆಯಾಗಲಿದೆ. ಹೀಗಾಗಿ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.