
ಬೆಂಗಳೂರು: ಕಳೆದ 3-4 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ಜೋರಾಗತೊಡಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಮಳೆಯಾಗಿದೆ.
ಆಗಸ್ಟ್ 11ರಂದು ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 12 ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ.
ಉಳಿದಂತೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ ಐದು ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.