alex Certify ರಾಜ್ಯದಲ್ಲಿ ಮುಂಗಾರು ಚುರುಕು: 4 ದಿನ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ‘ಅಲರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮುಂಗಾರು ಚುರುಕು: 4 ದಿನ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ‘ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ನಿನ್ನೆ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಮುಂದಿನ 3 -4 ದಿನಗಳಲ್ಲಿ ಕರಾವಳಿ ಮಲೆನಾಡು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 24, 25 ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಜೂನ್ 26 ರಂದು ಕಲಬುರ್ಗಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂನ್ 27ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು, ಶಿವಮೊಗ್ಗ, ಕಲಬುರ್ಗಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...