
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದಲ್ಲಿ ಮತ್ತೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 25 ರಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 25 ರಂದು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ ಭಾಗದಲ್ಲಿ ನವೆಂಬರ್ 26 ರಂದು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.