ಬೆಂಗಳೂರು: ಕೆಲವು ದಿನಗಳಿಂದ ಅನೇಕ ಭಾಗದಲ್ಲಿ ಮಳೆ ಕೊರತೆ ಕಂಡು ಬಂದಿದ್ದು, ಜುಲೈ 8 ರಿಂದ ಮುಂಗಾರು ಚುರುಕಾಗಲಿದೆ. ಬಂಗಾಳಕೊಲ್ಲಿಯಲ್ಲಿನ ವಾತಾವರಣ ಗಮನಿಸಿದಾಗ ದೇಶದ ಕರಾವಳಿ ಇತರೆ ಪ್ರದೇಶದಲ್ಲಿ ಮಳೆಯಾಗಲಿದೆ.
ಬಂಗಾಳಕೊಲ್ಲಿ, ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 5 ರಿಂದ ಮಳೆಯ ಪ್ರಮಾಣ ಏರಿಕೆಯಾಗಲಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಜುಲೈ 7 ಮತ್ತು 8 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.