ಬೆಂಗಳೂರು: ಜೂನ್ 21 ರಂದು ಹೊಸ ದಾಖಲೆ ಬರೆಯಲು ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.
ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ. ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯದಿಂದ ದೃಢಪಡಿಸಲಾಗಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ.
ಪ್ರಧಾನಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಮಂತ್ರಿ ಕಚೇರಿಯಿಂದ ಪತ್ರ ಬರೆಯಲಾಗಿದೆ. ಯೋಗ ದಿನಾಚರಣೆಯಲ್ಲಿ ಭಾಗವಹಿಸುವಂತೆ ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಕುಟುಂಬ ಸಮೇತ ಪ್ರಧಾನಿಯವರನ್ನು ಭೇಟಿಯಾಗಿ ಆಹ್ವಾನಿಸಿದ್ದರು.