
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಯುಗಾದಿ ಹಬ್ಬದ ಮಾರನೇ ದಿನದಿಂದ ಪ್ರಚಾರ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏಪ್ರಿಲ್ 10 ರಂದು ಹೊಸದುರ್ಗ, ಏಪ್ರಿಲ್ 12ರಂದು ಹೊಳಲ್ಕೆರೆಗೆ ಭೇಟಿ ನೀಡಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಏಪ್ರಿಲ್ 16, 17ರಂದು ಹಿರಿಯೂರಿಗೆ ಆಗಮಿಸಲಿದ್ದಾರೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಏಪ್ರಿಲ್ 17 ಅಥವಾ 18ರಂದು ಮೊಳಕಾಲ್ಮೂರು, ಚಳ್ಳಕೆರೆ, ಪಾವಗಡದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು ದಿನಾಂಕ ನಿಗದಿಪಡಿಸಬೇಕಿದೆ ಎಂದು ತಿಳಿಸಿದ್ದಾರೆ.