alex Certify BIG BREAKING: ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ, ಸಿಬಿಐನಿಂದ ಪತ್ನಿ ಮಲ್ಲಮ್ಮ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ, ಸಿಬಿಐನಿಂದ ಪತ್ನಿ ಮಲ್ಲಮ್ಮ ವಿಚಾರಣೆ

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್ ಗೌಡರ ಪತ್ನಿ ಮಲ್ಲಮ್ಮ ವಿಚಾರಣೆಗೆ ಆಗಮಿಸಿದ್ದಾರೆ.

ವಿಚಾರಣೆಗೆ ಬರುವಂತೆ ಅವರಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿನ ಪೊಲೀಸ್ ಕಚೇರಿಗೆ ಆಗಮಿಸಿದ ಅವರನ್ನು ಸಿಬಿಐ ತಂಡ ವಿಚಾರಣೆ ನಡೆಸಿದೆ.

ಮಲ್ಲಮ್ಮ ಕಾಂಗ್ರೆಸ್ ಪಕ್ಷ ಸೇರ್ಪಡೆಯ ರಹಸ್ಯವನ್ನು ಕೆದಕಲಾಗುತ್ತಿದೆ. ಮಲ್ಲಮ್ಮ ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ 2 ಕೋಟಿ ರೂ. ಖರ್ಚಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಕೋಟಿ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿದೆ. ಸಿಬಿಐನಿಂದ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ತೀವ್ರ ವಿಚಾರಣೆ ನಡೆಸಲಾಗಿದೆ. ಸೋಮಲಿಂಗ ಮೂಲಕ ಎರಡು ಕೋಟಿ ರೂಪಾಯಿ ಹಣ ಕೊಡಿಸಿರುವ ಬಗ್ಗೆಯೂ ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...