alex Certify Viral Video | ಪಂದ್ಯ ನಡೆಯುವಾಗಲೇ ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಅಪ್ಪಿಕೊಂಡ ಅಭಿಮಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Viral Video | ಪಂದ್ಯ ನಡೆಯುವಾಗಲೇ ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಅಪ್ಪಿಕೊಂಡ ಅಭಿಮಾನಿ

article-image

ಪ್ರಸಕ್ತ ಐಪಿಎಲ್ ಪಂದ್ಯಾವಳಿಗಳು ನಡೆಯುತ್ತಿದ್ದು, ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶನಿವಾರದಂದು ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲೂ ಕೈ ಚೆಲ್ಲಿದೆ.

ಈ ಪಂದ್ಯ ನಡೆಯುವಾಗಲೇ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ತನ್ನ ನೆಚ್ಚಿನ ಆಟಗಾರನನ್ನು ಅಪ್ಪಿಕೊಂಡಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೆರ್ಸಿ ತೊಟ್ಟಿದ್ದ ಈ ಯುವಕ ಸೆಕ್ಯೂರಿಟಿಯವರ ಕಣ್ತಪ್ಪಿಸಿ ಮೈದಾನಕ್ಕೆ ನುಗ್ಗಿ ಕೊಹ್ಲಿಯವರಿಗೆ ಕೈ ಕುಲುಕಿ ಅಪ್ಪಿಕೊಂಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸೆಕ್ಯೂರಿಟಿ ತಂಡ ಆತನನ್ನು ಮೈದಾನದಿಂದ ಹೊರಗೆ ಕರೆದೊಯ್ದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...