alex Certify ನೋಡನೋಡುತ್ತಿದ್ದಂತೆ ಹಠಾತ್ ಕುಸಿದು ಸಾವನ್ನಪ್ಪಿದ ಯುವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆ ಹಠಾತ್ ಕುಸಿದು ಸಾವನ್ನಪ್ಪಿದ ಯುವತಿ

ಕ್ರೈಸ್ತ ಸಮುದಾಯದಲ್ಲಿ ಮದುವೆಗೂ ಮುನ್ನ ನಡೆಯುವ ರೋಸ್ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಯುವತಿಯೊಬ್ಬರು ಹಠಾತ್ ಕುಸಿದು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.

ಕೊಳಲಗಿರಿ ಹಾವಂಜಿಯಲ್ಲಿ ನಡೆಯುತ್ತಿದ್ದ ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದ 23 ವರ್ಷದ ಜೋತ್ಸ್ನಾ ಮರಿಯಾ ಕೋತಾ ಸಾವನ್ನಪ್ಪಿದವರಾಗಿದ್ದಾರೆ.

ಸಮಾರಂಭದಲ್ಲಿ ಲವಲವಿಕೆಯಿಂದ ಪಾಲ್ಗೊಂಡಿದ್ದ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಉಡುಪಿಯ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರದಂದು ಮೃತಪಟ್ಟಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಆರೋಗ್ಯವಂತರಾಗಿರುವ ಯುವ ಜನತೆಯೇ ಈ ರೀತಿ ಹಠಾತ್ ಸಾವಿಗೀಡಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈಗ ಈ ಕುರಿತು ಚರ್ಚೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...