
ಬೆಂಗಳೂರು: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಅವರಿಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನೊಬ್ಬ ಅಶ್ಲೀಲ ಸನ್ನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರುಚಾಲಕ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿ ಕುಮಾರ್ ನಿನ್ನೆ ಸಂಜೆ ಬೆಂಗಳೂರಿನ ಗೋಪಾಲನ್ ಮಾಲ್ ಬಳಿ ತೆರಳುತ್ತಿದ್ದ ವೇಳೆ, ಐಷಾರಾಮಿ ಕಾರಿನಲ್ಲಿ ಬಂದ ಯುವಕನೊಬ್ಬ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿ ಕಾರುಚಲಾಯಿಸಿಒಂಡು ಹೋಗಿದ್ದಾನೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಅಕ್ಷತಾ ರವಿಕುಮಾರ್ ಅವರಿಗೆ ಅಶ್ಲೀಲವಾಗಿ ಕೈ ಸನ್ನೆ ಮಾಡಿದ್ದ. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ವಿಡಿಯೋ ವೈರಲ್ ಆಗಿತ್ತು.
ಘಟನೆ ಸಂಬಂಧ ಚಾಮರಾಜಪೇಟೆ ಠಾಣೆಯಲ್ಲಿ ಯುವಕ ಹರ್ಷ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಆರೋಪಿ ಹರ್ಷನನ್ನು ಪೊಲೀಸರು ಬಂಧಿಸಿದ್ದಾರೆ.