
ಬೆಂಗಳೂರು: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿಯೇ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ.
ಯುವಕ ಪಾರ್ಕ್ ಮಾಡಿದ್ದ ತನ್ನ ಗ್ರ್ಯಾಂಡ್ ಐಟೆನ್ ಕಾರಿನಲ್ಲಿಯೇ ಸಾವನ್ನಪ್ಪಿದ್ದಾನೆ. ಫೆ.20ರಂದು ನಡೆದಿರುವ ಘಟನೆ ತಡವಾಗಿ ಬ್ಬೆಳಕಿಗೆ ಬಂದಿದೆ. ಕಾರಿನಲ್ಲಿರುವ ಮೃತದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.