
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ ಜ್ವರಕ್ಕೆ ಮೃತಪಟ್ಟವರು ಎಂದು ಹೇಳಲಾಗಿದೆ. ಕಳೆದ ಒಂದು ವಾರದಿಂದ ಹುಷಾರಿಲ್ಲದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಮೃತ ಚಂದ್ರಶೇಖರ್ ಅವರಿಗೆ ತಂದೆ, ತಾಯಿ, ತಂಗಿ ಇದ್ದಾರೆ.