
ತುಮಕೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದ ಘಟನೆ ತುಮಕೂರಿನಲ್ಲಿ ನಡೆದಿದೆ.
20 ವರ್ಷದ ರಿಷಬ್ ಪಾಷಾ ಕೊಲೆಯಾದ ಯುವಕ. ಊಟಕ್ಕೆ ಕುಳಿತಿದ್ದ ಯುವಕನನ್ನು ಕರೆದು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.
ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ಈ ಘಟನೆ ನಡೆದಿದೆ. ರಕ್ತದ ಮಡುವಲ್ಲಿ ಬಿದ್ದಿದ್ದ ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಹುಡುಗಿಯ ವಿಚಾರವಾಗಿ ಗಲಾತೆ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.