
ಚಿಕ್ಕಬಳ್ಳಾಪುರ: ಹಾಡಹಗಲೇ ಮಚ್ಚು ತೋರಿಸಿ ಯುವಕನೊಬ್ಬನನ್ನು ದುಷ್ಕರ್ಮಿಗಳು ರಾಬರಿ ಮಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕುಡುವತಿ-ಹುರಳಗುರ್ಕಿಯಲ್ಲಿ ನಡೆದಿದೆ.
ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಚ್ಚು ತೋರಿಸಿ ಯುವಕನ ಬಳಿ ಇದ್ದ ಹಣ, ಮೊಬೈಲ್ ದೋಚಿ ಪರಾರಿಯಾಗಿದ್ದಾರೆ. ಮುದ್ದೆಹಳ್ಳಿಯ ಸತ್ಯಸಾಯಿ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ.
ಯುವಕನನ್ನು ಬೆದರಿಸಿ ರಾಬರಿ ಮಾಡುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ರಾಬರಿ ಮಾಡಿ ಎಸ್ಕೇಪ್ ಆಗುತ್ತಿದ್ದ ಕಳ್ಳರನ್ನು ಹಿಡಿಯಲು ಸ್ಥಳೀಯರು ಯತ್ನಿಸಿದ್ದಾರೆ. ಆದರೆ ಕಳ್ಳರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ನಂದಿಗಿರಿಧಾಮ ಠಾಣೆಯಲ್ಲಿ ಯುವಕ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.