ತುಮಕೂರು: ಯುವಕನೊಬ್ಬ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಮಂಗಳಮುಖಿಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.
ತುಮಕೂರಿನ ಕುಣಿಗಲ್ ಕೋಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಂಡ್ಯ ಮೂಲದ ಆದಿಲ್ ಎಂಬ 23 ವರ್ಷದ ಯುವಕ 21 ವರ್ಷದ ಮಂಗಳಮುಖಿಗೆ ಚಾಕು ಇರಿದಿದ್ದಾನೆ.
ಮಂಗಳಮುಖಿ ಹನಿಷಾ ಹಾಗೂ ಆದಿಲ್ ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮದ ನಿಮಿತ್ತ ಹನಿಷಾ ಆಗಾಗ ಬೇರೆ ಬೇರೆ ಊರುಗಳಿಗೆ ಹೋಗುತ್ತಿದ್ದಳು. ಇದಕ್ಕೆ ಆದಿಲ್ ಆಕ್ಷೇಪ ವ್ಯಕ್ತಪಡಿಸಿದ್ದ ಅಲ್ಲದೇ ಹನಿಷಾ ಮೇಲೆ ಹಲ್ಲೆ ನಡೆಸಿದ್ದ. ಇಬ್ಬರ ನಡುವೆ ಜಗಳವಾಗಿ ಹನಿಷಾ, ಆದಿಲ್ ಪ್ರೀತಿ ನಿರಾಕರಿಸಿ ದೂರವಾಗಲು ನಿರ್ಧರಿಸಿದ್ದಳು.
ಇದೇ ಕಾರಣಕ್ಕೆ ಆದಿನ್ ಹನಿಷಾಳಿಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಲ್ಲೆಗೊಳಗಾದ ಹನಿಷಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.