ಬೀದರ್: ಆನ್ ಲೈನ್ ಗೇಮ್ ನಲ್ಲಿ ಹಣ ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದ ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೀದರ್ ಜಿಲ್ಲೆಯ ಹುಲಸೂರು ಬೇಲೂರ ಗ್ರಾಮದಲ್ಲಿ ನಡೆದಿದೆ.
ವಿಜಯ್ ಕುಮಾರ್ ಜಗನ್ನಾಥ ಹೊಳ್ಳೆ (25) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಯುವಕನ ದೇಹದ ಬಹುಭಾಗ ಸುತ್ಟು ಹೋಗಿದೆ.
ಡಿ.ಫಾರ್ಮ್ ಪದವೀಧರನಾಗಿರುವ ಯುವಕ ಆನ್ ಲೈನ್ ಗೇಮ್ ನಲ್ಲಿ 1.50 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದಾನೆ. ಇದಕ್ಕಾಗಿಯೇ ಸಾಲವನ್ನೂ ಮಾಡಿದ್ದ. ಸದ್ಯ ಯುವಕ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ.
ಮೆಹಕರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.