
ಮೈಸೂರು: ಮೈಮೇಲೆ ದೆವ್ವ ಬರುತ್ತದೆ ಎಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಿನ್ನತೆಗೆ ಒಳಗಾಗಿದ್ದ ವೃಷಭೇಂದ್ರ(21) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಮೈಸೂರಿನ ಬೆಮಲ್ ಬಡಾವಣೆಯ ಉದ್ಯಾನವನದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.