ಕೆಲಸ ಸಿಗುತ್ತಿಲ್ಲ ಎಂದು ಮನನೊಂದಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಮಗ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
33 ವರ್ಷದ ಇಂಜಿನಿಯರಿಂಗ್ ಪದವೀಧರ ತನಗೆ ನೌಕರಿ ಸಿಗುತ್ತಿಲ್ಲ ಎಂಬ ಕೊರಗಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ವಿಷಯ ಕೇಳಿ ತಾಯಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಮನೆಯವರೆಲ್ಲರೂ ಮದುವೆ ಸಮಾರಂಭಕ್ಕೆಂದು ಹೋಗಿದ್ದರು. ಈ ವೇಳೆ ಯುವಕ ಮನೀಶ್ ವಿಷ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಅಕ್ಕಪಕ್ಕದ ಮನೆಯವರು ಕರೆ ಮಾಡಿ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಬಂದು ನೋಡುವಷ್ಟರಲ್ಲಿ ಮನೀಶ್ ಪ್ರಜ್ಞೆ ಕಳೆದುಕೊಂಡಿದ್ದ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ತಾಯಿಗೆ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ವಿಷಯ ಕೇಲಿ ಸಹಿಸಿಕೊಳ್ಳಲಾಗಿಲ್ಲ. ಇದರಿಂದ ಆಘಾತಕ್ಕೊಳಗಾಗಿ ಅವರೂ ಕೂಡ ಮಗನ ಹಿಂದೆಯೇ ಸಾವಿನ ದಾರಿ ಹಿಡಿದಿದ್ದಾರೆ.