ಬೆಂಗಳೂರು: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಸುಭಾಷ್ ನಗರದ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರವೀಣ್ (30) ಆತ್ಮಹತ್ಯೆಗೆ ಶರಣಾದ ಯುವಕ.
ಎರಡು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆರು ತಿಂಗಳ ಹಿಂದೆ ಯುವತಿ ಬೇರೊಬ್ಬನೊಂದಿಗೆ ವಿವಾಹವಾಗಿದ್ದಳು. ಇದರಿಂದ ಮನನೊಂದ ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾನೆ.
ನೆಲಮಂಗಲ ಟೌನ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.