ರಾಮನಗರ: ಬಿ.ಇ ಪದವೀಧರನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರದ ರೈಲು ನಿಲ್ದಾಣ ಬಳಿ ನಡೆದಿದೆ.
ಮಧು (23) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಬಿ.ಇ ಪದವೀಧರನಾಗಿದ್ದ ಮಧು, ಬೆಂಗಳೂರಿನ ನಾಗರಬಾವಿ ಮೂಲದವನು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಇದೀಗ ಏಕಾಏಕಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಯುವಕನ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.