
ಚಿಕ್ಕಬಳ್ಳಾಪುರ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ತೀವ್ರವಾಗಿ ಮನನೊಂದಿದ್ದ ಯುವಕ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತನಗರದಲ್ಲಿ ನಡೆದಿದೆ.
24 ವರ್ಷದ ಮಹೇಶ್ ಮೃತ ದುರ್ದೈವಿ. ತಾನು ವಾಸವಿದ್ದ ಬಡಾವಣೆಯ ಯುವತಿಯನ್ನೇ ಮಹೇಶ್ ಪ್ರೀತಿಸಿದ್ದ. ಕೆಲದಿನಗಳಿಂದ ಆಕೆ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾಳೆ ಎಂದು ಸಂಬಂಧಿಕರ ಬಳಿ ಅಳಲು ತೋಡಿಕೊಂಡಿದ್ದನಂತೆ. ಇದೀಗ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಮಹೇಶ್ ನೇಣಿಗೆ ಕೊರಳೊಡ್ಡಿದ್ದಾನೆ.
ಮೃತ ಮಹೇಶ್ ಪ್ರಿಯತಮೆ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಚಿಕಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.