ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣದಲ್ಲಿ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಬಿಸಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ ಹಾಕಿದ ಘಟನೆ ಸೋಮವಾರ ನಡೆದಿದೆ.
ಹೊಸನಗರ ಹೊರವಲಯದ ಕಾಳಿಕಾಪುರ ರಸ್ತೆಯಲ್ಲಿ ಮಹಿಳೆಯೊಬ್ಬರು ರಸ್ತೆ ಬದಿ ಕಸ ಎಸೆದಿದ್ದನ್ನು ಸ್ಥಳೀಯ ಯುವಕ ಕವೀಶ್ ಪ್ರಶ್ನಿಸಿದ್ದು, ವಿಡಿಯೋ ಮಾಡಿಕೊಂಡಿದ್ದಾರೆ. ಅಲ್ಲಿ ಕಸ ಎಸೆಯಬೇಡಿ ದುರ್ನಾತ ಬೀರುತ್ತದೆ. ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತದೆ ಎಂದು ಹೇಳಿದ್ದಾರೆ.
ಇದರಿಂದ ಆಕ್ರೋಶಗೊಂಡ ಮಹಿಳೆ ಮತ್ತು ಆಕೆಯ ಪ್ರತಿ ಸಲ್ಮಾನ್ ಅವರು ಜಗಳವಾಡಿ, ಅವಾಚ್ಯ ಪದಗಳಿಂದ ನಿಂದಿಸಿ ಕವೀಶ್ ಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕವೀಶ್ ಹೊಸನಗರ ಠಾಣೆ ಪೋಲೀಸರಿಗೆ ದೂರು ನೀಡಿದ್ದಾರೆ.