alex Certify BIG NEWS: ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶ

ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ

ತಮಿಳು ಚಿತ್ರರಂಗದ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಓಮಂದೂರರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೇಡಗು, ರಾಕಥಾನ್ ಮೊದಲಾದ ಚಿತ್ರಗಳಿಗೆ ಸಂಗೀತ ನಿರ್ದೇಶನ ನೀಡುವ ಮೂಲಕ ಹೆಸರಾಂತ ಸಂಗೀತ ನಿರ್ದೇಶಕರ ಮೆಚ್ಚುಗೆ ಪಾತ್ರರಾಗಿದ್ದ ಪ್ರವೀಣ್ ಕುಮಾರ್ ಯಶಸ್ಸಿನ ಹಾದಿಯಲ್ಲಿರುವಾಗಲೇ ಸಾವಿಗೀಡಾಗಿರುವುದು ಅವರ ಅಭಿಮಾನಿಗಳಿಗೆ ನೋವು ತಂದಿದೆ.

ಪ್ರವೀಣ್ ಕುಮಾರ್ ಅವರಿಗೆ ತಮಿಳು ಚಿತ್ರರಂಗದಿಂದ ಸಾಕಷ್ಟು ಅವಕಾಶಗಳು ಅರಸಿಕೊಂಡು ಬಂದಿದ್ದರೂ ಸಹ ಅನಾರೋಗ್ಯದ ಕಾರಣಕ್ಕೆ ಅವರು ಮೊದಲಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...