ಭಟ್ಕಳ : Instagram ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ಕೊಡಮಕ್ಕಿ ಹಾಡವಳ್ಳಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ನೇತ್ರಾ ಮುತ್ತಯ್ಯ ಗೋವಾಳಿ ಎಂದು ಗುರುತಿಸಲಾಗಿದೆ. ಭಟ್ಕಳ ನಗರದಲ್ಲಿ ಖಾಸಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಈಕೆಗೆ ಯುವಕ ಗೋವರ್ಧನ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ.
ಇನ್ ಸ್ಟಾಗ್ರಾಂ ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿದ ಯುವಕ ನಂತರ ತನ್ನ ವರಸೆ ಬದಲಾಯಿಸಿದ್ದಾನೆ. ತಾನು ಖರ್ಚು ಮಾಡಿದ ಹಣ ವಾಪಸ್ ನೀಡುವಂತೆ ಚಿತ್ರಹಿಂಸೆ ನೀಡಿದ್ದಾನೆ. ಅಲ್ಲದೇ ನಿನ್ನ ಅಶ್ಲೀಲ ಫೋಟೋಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.