
ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ ಬಿದ್ದಿದ್ದು, ಗಾಯಗೊಂಡ ಆತನನ್ನು ಶಂಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಂಜಿತ್ ಸ್ಥಳೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.