alex Certify ಪೊಲೀಸರ ಕಿರುಕುಳ ಆರೋಪ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಕಿರುಕುಳ ಆರೋಪ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಕಿರಣ್ ಕುಮಾರ್(23) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದ ಕಿರಣ್ ಕುಮಾರ್ ನನ್ನು ಬಿಳಿಗೆರೆ ಠಾಣೆ ಪೊಲೀಸರು ಗಲಾಟೆ ಪ್ರಕರಣವೊಂದರಲ್ಲಿ ವಶಕ್ಕೆ ಪಡೆದಿದ್ದರು. ಪೊಲೀಸರಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದ ಕಿರಣ್ ಕುಮಾರ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಆತ್ಮಹತ್ಯೆಗೆ ಮೊದಲು ಪೊಲೀಸರು ಕಿರುಕುಳ ನೀಡಿದ್ದಾಗಿ ವಿರಿಯೋ ಮಾಡಿ ಆರೋಪಿಸಿದ್ದು, ತೀವ್ರ ಸುಟ್ಟ ಗಾಯಗಳಾಗಿದ್ದ ಕಿರಣ್ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...