
ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆ ಆರ್ಭಟಿಸುತ್ತಿದ್ದು ಹಳ್ಳಕೊಳ್ಳಗಳು, ಕೆರೆ, ನದಿಗಳು ಮತ್ತೆ ತುಂಬಿ ಹರಿಯುತ್ತಿವೆ. ಹೀಗೆ ನದಿ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿರುವಾಗ ಅದನ್ನು ದಾಟಲು ಹೋದ ಇಬ್ಬರು ಯುವಕರು ಕೊಚ್ಚಿಕೊಂಡು ಹೋದ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಇಡಗೂರು ಜಾಲಹಳ್ಳಿ ಬಳಿ ಈ ಘಟನೆ ನಡೆದಿದ್ದು, ಬಸವರಾಜ ಹಾಗೂ ಪ್ರಶಾಂತ್ ಎಂಬ ಇಬ್ಬರು ಯುವಕರು ರಸ್ತೆ ದಾಟುವಾಗ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಕೂಡಲೇ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಪ್ರಶಾಂತ್ ಎಂಬಾತನನ್ನು ರಕ್ಷಣೆ ಮಾಡಲಾಗಿದೆ.
ಆದರೆ ನಾಪತ್ತೆಯಾಗಿದ್ದ ಬಸವರಾಜು ಶವ ಇಂದು ಬೆಳಿಗ್ಗೆ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.