ಬೆಂಗಳೂರು : ಅನೇಕಲ್ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ .
ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಎಂಬುವವರು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿನೇಶ್ ಎಂಬುವವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿನ್ನೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಇದೀಗ ಮೃತಪಟ್ಟವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ .
ವೆಂಕಟೇಶ್ ಹಾಗೂ ಈತನ ಸ್ನೇಹಿತ ಪಟಾಕಿ ಖರೀದಿಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಸ್ನೇಹಿತ ಪಾರಾಗಿದ್ದರು. ಆದರೆ ವೆಂಕಟೇಶ್ ಬೆಂಕಿಗೆ ಸಿಲುಕಿದ್ದರು. ಅನೇಕಲ್ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ. ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಸಂಬಂಧ ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.