
ಬೆಳಗಾವಿ: ಸರ್ಕಾರಿ ಶಾಲೆ ಕೊಠಡಿ ಮುಂದೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ, ಮಾರಿಹಾಳ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ 24 ವರ್ಷದ ಮಹಾಂತೇಶ ರುದ್ರಪ್ಪನನ್ನು ಹತ್ಯೆ ಮಾಡಲಾಗಿದೆ. ಮಧ್ಯರಾತ್ರಿ ಮಹಾಂತೇಶನನ್ನು ಹತ್ಯೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.