ಬೆಂಗಳೂರು: ಯುವತಿ ಪ್ರೀತಿಸಿ ಕೈಕೊಟ್ಟಿದ್ದರಿಂದ ಯುವಕನೊಬ್ಬ ಆಕೆಯ ಖಾಸಗಿ ಫೋಟೋ ಜಾಲತಾಣದಲ್ಲಿ ಹರಿಬಿಟ್ಟು ತೇಜೋವಧೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಮಂಜುನಾಥ ನಗರದಲ್ಲಿ ನಡೆದಿದೆ.
ಯುವತಿಯ ಜೊತೆಗೆ ಇದ್ದ ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಹಾಕಿದ ಯುವಕ ದರ್ಶನ್ ಎಂಬಾತ ವಿಕೃತಿ ಮೆರೆದಿದ್ದು, ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಗಲಗುಂಟೆಯ ಫರ್ನಿಚರ್ ಅಂಗಡಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದು, ಪ್ರೀತಿಸುವುದಿಲ್ಲ ಎಂದಿದ್ದಕ್ಕೆ ಜಾಲತಾಣದಲ್ಲಿ ಖಾಸಗಿ ಫೋಟೋ ಹಾಕಿ ಮಾನಹಾನಿ ಮಾಡಿದ್ದಾನೆ. ಈ ಬಗ್ಗೆ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ನಾಪತ್ತೆಯಾಗಿರುವ ದರ್ಶನ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.