alex Certify ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಫೇಲಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಫೇಲಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ

ಚಿಕ್ಕಮಗಳೂರು: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.

23 ವರ್ಷದ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಹೇಳಲಾಗಿದೆ. ಭಾರತೀಯ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗದ ಕಾರಣ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಮಕಾತಿ ಪರೀಕ್ಷೆಯಲ್ಲಿ ಫೇಲ್ ಆಗಿರುವುದನ್ನು ಮನೆಯವರಿಗೆ ಹೇಳುವ ಧೈರ್ಯ ನನಗಿಲ್ಲ ಎಂದು ಅವರು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆನ್ನಲಾಗಿದೆ. ಕಾರ್ತಿಕ್ ಅವರಿಗೆ ತಾಯಿ ಮತ್ತು ಸಹೋದರ ಇದ್ದಾರೆ. ಪೊಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...