ಯಾದಗಿರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನ ಬೈಕ್ ಖರೀದಿಗೆ ಸಹಾಯ ಧನ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ.23 ರವರೆಗೆ ವಿಸ್ತರಿಸಲಾಗಿದೆ.
ಇ- ವಾಣಿಜ್ಯ ಸಂಸ್ಥೆಗಳಾದ ಜಿಮ್ಯಾಟೋ, ಸ್ವಿಗ್ಗಿ ಸೇರಿದಂತೆ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ 25,000 ರೂ. ಸಹಾಯ ಧನವನ್ನು ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು. ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಜ.23 ರ ಸಂಜೆ 5.00 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಿ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.