ಬೆಂಗಳೂರು: ಅಕ್ಟೋಬರ್ 11 ರಂದು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಲಿದ್ದು, ಯುವತಿಯರಿಗೆ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಅವಕಾಶ ಕಲ್ಪಿಸಲಾಗಿದೆ.
18 ರಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದ್ದು, ಒಂದು ದಿನ ಯುವ ಕ್ರೀಡಾಧಿಕಾರಿಯಾಗಿ ಅನುಭವ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಇಲಾಖೆಯ ಎಡಿ, ಡಿಡಿ ಕಾರ್ಯವೈಖರಿ ಪರಿಚಯಿಸಲು ಅವಕಾಶ ನೀಡಲಾಗಿದೆ ಎಂದು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಭಾರತದ ಬ್ರಿಟಿಷ್ ಹೈಕಮಿಷನ್ ದೇಶದ 18 ರಿಂದ 23 ವರ್ಷ ವಯಸ್ಸಿನ ಯುವತಿಯರಿಗೆ ಬ್ರಿಟನ್ ಉನ್ನತ ರಾಜತಾಂತ್ರಿಕ ಅಧಿಕಾರಿಯ ಒಂದು ದಿನದ ಆಡಳಿತ ಅನುಭವ ಪಡೆಯಲು ಅವಕಾಶ ನೀಡುವ ಕುರಿತು ‘ಹೈ ಕಮಿಷನರ್ ಫಾರ್ ಎ ಡೇ’ ಸ್ಪರ್ಧೆ ಆಯೋಜಿಸಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದೇ ರೀತಿ ರಾಜ್ಯ ಕ್ರೀಡಾ ಇಲಾಖೆಯು ಸಹಾಯಕರು ಮತ್ತು ಉಪ ನಿರ್ದೇಶಕರ ಕಾರ್ಯವೈಖರಿಯನ್ನು ಪರಿಚಯಿಸಲು 18ರಿಂದ 23 ವರ್ಷದ ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.
ಎಲ್ಲಾ ಜಿಲ್ಲೆಗಳಲ್ಲಿ ಸಹಾಯಕ ಉಪ ನಿರ್ದೇಶಕರೊಂದಿಗೆ ಒಂದು ದಿನ ಕರ್ತವ್ಯ ನಿರ್ವಹಿಸಬಹುದು. ಆಸಕ್ತರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ರವರೆಗೆ ಅವಕಾಶ ನೀಡಲಾಗಿದೆ. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಅರ್ಹರನ್ನು ಆಯ್ಕೆ ಮಾಡಲಾಗುವುದು. https://bit.ly/Oct 11 ಮೂಲಕ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.