alex Certify ರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಪ್ರಚಾರ: ಬೆಳಗಾವಿಯಲ್ಲಿ ಕಾಂಗ್ರೆಸ್ 4ನೇ ಗ್ಯಾರಂಟಿ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಪ್ರಚಾರ: ಬೆಳಗಾವಿಯಲ್ಲಿ ಕಾಂಗ್ರೆಸ್ 4ನೇ ಗ್ಯಾರಂಟಿ ಘೋಷಣೆ ಸಾಧ್ಯತೆ

ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ಯುವ ಕ್ರಾಂತಿ ರ್ಯಾಲಿ ನಡೆಯಲಿದ್ದು, ಕಾಂಗ್ರೆಸ್ ನ ನಾಲ್ಕನೇ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ.

ಭಾರತ್  ಜೋಡೋ ಯಾತ್ರೆಯ ಭರ್ಜರಿ ಯಶಸ್ಸಿನ ನಂತರ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆ ಅಖಾಡಕ್ಕೆ ಧುಮುಕಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಮೂರು ಪ್ರಮುಖ ಭರವಸೆ ನೀಡಿದ್ದು, ಯುವಕರಿಗೆ ನಾಲ್ಕನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...