ಬೆಂಗಳೂರು: ರಾಜ್ಯದಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗೆ 50ಕ್ಕೂ ಅಧಿಕ ಅಲ್ಪಾವಧಿ ಕೋರ್ಸ್ ಗಳನ್ನು ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ- ಜರ್ಮನ್ ತಾಂತ್ರಿಕ ತರಬೇತಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಪಾನ್ ನ ಕಿಮುರಾ ಫೌಂಡ್ರಿ ಸಹಯೋಗದಲ್ಲಿ ಏರ್ಪಡಿಸಿದ್ದ ಕಾಸ್ಟಿಂಗ್ ಟೆಕ್ನಾಲಿ ಲ್ಯಾಬ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರ ಕೌಶಲ್ಯಾಭಿವೃದ್ಧಿಗೆ 50ಕ್ಕೂ ಹೆಚ್ಚಿನ ಅಲ್ಪಾವಧಿ ಕೋರ್ಸ್ ಗಳೊಂದಿಗೆ 7 ಕೌಶಲ್ಯ ವಲಯಗಳಲ್ಲಿ ತರಬೇತಿ ಕಾರ್ಯಕ್ರಮ ರೂಪಿಸಲಾಗಿದೆ. ವಿದ್ಯೆಯ ಜೊತೆ ಕೌಶಲ್ಯ ಇದ್ದಾಗ ಶಿಕ್ಷಣ ಪರಿಪೂರ್ಣವಾಗುತ್ತದೆ. ಅರೆಕಾಲಿಕ, ಪೂರ್ಣಕಾಲಿಕ ಕೌಶಲ್ಯಾಭಿವೃದ್ಧಿ ತರಬೇತಿ ಕೋರ್ಸ್ ಗಳಿವೆ. ವಿಶ್ವದ ಪ್ರಮುಖ ಸಂಸ್ಥೆಗಳ ಸಹಯೋಗ ಹೊಂದಿವೆ. ಬೆಂಗಳೂರು, ಕಲಬುರಗಿ, ಬೆಳಗಾವಿ, ಮಂಗಳೂರು, ಹುಬ್ಬಳ್ಳಿ, ಮೈಸೂರು ಕೇಂದ್ರಗಳಲ್ಲಿ ಕರ್ನಾಟಕ ಜರ್ಮನ್ ಮಲ್ಟಿ ಸ್ಕಿಲ್ ಡೆವಲಪ್ ಸೆಂಟರ್ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.