
ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ YSRP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹಿಂದೂಪುರ ಲೋಕಸಭಾ ಕ್ಷೇತ್ರದಿಂದ ಜೆ. ಶಾಂತಾ ಸ್ಪರ್ಧಿಸಲಿದ್ದಾರೆ.
ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ. 2009ರ ಲೋಕಸಭೆ ಚುನಾವಣೆಯಲ್ಲಿ ಶಾಂತಾ ಜಯಗಳಿಸಿದ್ದರು. ಪ್ರಸ್ತುತ ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಸಹೋದರಿ ಶಾಂತಾ ಬಿಜೆಪಿಗೆ ಗುಡ್ ಬೈ ಹೇಳಿದ್ದರು. ಬಳ್ಳಾರಿಯಿಂದ ಆಂಧ್ರಕ್ಕೆ ಶಿಫ್ಟ್ ಆಗಿ ಹಿಂದೂಪುರದಲ್ಲಿ YSRP ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಮೇ 13 ರಂದು ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆಯ ಮತದಾನ ನಡೆಯಲಿದೆ.
ವೈ.ಎಸ್. ರಾಜಶೇಖರ ರೆಡ್ಡಿ ಸಮಾಧಿ ಬಳಿ ಆಂಧ್ರಪ್ರದೇಶ ಮುಖ್ಯಮಂತ್ರಿ, YSRP ಸಂಸ್ಥಾಪಕ ಜಗನ್ ಮೋಹನ್ ರೆಡ್ಡಿ ಟಿಕೆಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.