
ಬೆಂಗಳೂರು: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ಗೆ ನೀಡಿದ ಭರವಸೆಯಂತೆ ಶನಿವಾರ ಕೋರ್ಟ್ ಎದುರು ಹಾಜರಾಗಿ ಅವರು ಹಣ ಪಾವತಿಸಬೇಕಿತ್ತು. ಆದರೆ ಅವರು ಗೈರುಹಾಜರಾಗಿದ್ದು, ಹಾಜರಾತಿಯಿಂದ ವಿನಾಯಿತಿ ಕೋರಿದ್ದರು. ನ್ಯಾಯಾಲಯ ವಿನಾಯಿತಿ ನೀಡಲು ನಿರಾಕರಿಸಿ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆ.ಪ್ರೀತ್ ಅವರು ಚೆಕ್ ಬೌನ್ಸ್ ಪ್ರಕರಣದಲ್ಲಿ ವಾರೆಂಟ್ ಜಾರಿಗೆ ಆದೇಶ ಹೊರಡಿಸಿದ್ದಾರೆ.