
ಚಿಕ್ಕಮಗಳೂರು: ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ. ಅವರಿಗೆ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರುವಂತೆ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಧನಂಜಯ ಮನವಿ ಮಾಡಿದ್ದಾರೆ.
ವೈ.ಎಸ್.ವಿ. ದತ್ತ ಅವರಿಗೆ ಕಾಂಗ್ರೆಸ್ ಪಕ್ಷ ಅವಮಾನ ಮಾಡಿದೆ. ಕಾಂಗ್ರೆಸ್ ಪಕ್ಷ ಬಿಜೆಪಿಯ ಬಿ ಟೀಂ ಆಗಿದೆ. ವೈ.ಎಸ್.ವಿ. ದತ್ತ ಅವರು ಜೆಡಿಎಸ್ ಗೆ ಬಂದರೆ ಲಾಭವಾಗುತ್ತದೆ ಎಂದು ಪಕ್ಷದ ಅಭ್ಯರ್ಥಿ ಧನಂಜಯ್ ಹೇಳಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಬಂದರೆ ನಮ್ಮ ನಾಯಕರು ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತಾರೆ ಎಂದು ತಿಳಿಸಿದ್ದಾರೆ.