ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಸಿಗುವ ಭರವಸೆಯೊಂದಿಗೆ ಜೆಡಿಎಸ್ ತೊರೆದಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮತ್ತೆ ಜೆಡಿಎಸ್ ಸೇರಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ವೈ.ಎಸ್.ವಿ. ದತ್ತ ಮಾತುಕತೆ ನಡೆಸಿದ್ದಾರೆ. ಹಲವು ದಶಕಗಳಿಂದ ಜೆಡಿಎಸ್ ನಲ್ಲಿದ್ದ ದತ್ತ ಇತ್ತೀಚೆಗಷ್ಟೇ ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಕಡೂರು ಕ್ಷೇತ್ರದಿಂದ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ, ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದು, ಬೆಂಬಲಿಗರೊಂದಿಗೆ ಚರ್ಚೆ ನಡೆಸಿದ ದತ್ತ ಮತ್ತೊಮ್ಮೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಚಿಂತನೆಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ಅವರು ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಈಗಾಗಲೇ ಹೆಚ್.ಡಿ. ಕುಮಾರಸ್ವಾಮಿ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದು, ಹೀಗಾಗಿ ದತ್ತ ದೇವೇಗೌಡರ ಮೊರೆ ಹೋಗಿದ್ದಾರೆ.