alex Certify YSV ದತ್ತ ಪಕ್ಷ ಬಿಡುವ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

YSV ದತ್ತ ಪಕ್ಷ ಬಿಡುವ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದೇನು ಗೊತ್ತಾ…?

ನವದೆಹಲಿ: ಮಾಜಿ ಶಾಸಕ ವೈ.ಎಸ್.ವಿ. ದತ್ತ ಜೆಡಿಎಸ್ ಪಕ್ಷ ತೊರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ.

ಒಂದೆರಡು ವಿಚಾರದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ಮೇಲೆ ದತ್ತ ಅವರಿಗೆ ಬೇಸರ ಇರಬಹುದು. ಕುಮಾರಸ್ವಾಮಿ ಹಿಂದೆಯೇ ದತ್ತ ಅವರನ್ನು ಎಂಎಲ್ಸಿ ಮಾಡಿದ್ದರು. ನನ್ನ ಜೊತೆ ಇರುವಂತೆ ದತ್ತ ಅವರಿಗೆ ಹೇಳಿದ್ದೇನೆ. ಮೇಲುಕೋಟೆ ಶಾಸಕ ಸಿ.ಎಸ್. ಪುಟ್ಟರಾಜು ವಿಚಾರದಲ್ಲಿಯೂ ಇಂತಹ ಊಹಾಪೋಹಗಳು ಇದ್ದವು ಎಂದು ಹೇಳಿದ್ದಾರೆ.

ಅನಿತಾ ಕುಮಾರಸ್ವಾಮಿ ಚುನಾವಣೆಗೆ ನಿಲ್ಲಲ್ಲ ಎನ್ನುವ ಹೇಳಿಕೆಯ ಬಗ್ಗೆ ಕುಮಾರಸ್ವಾಮಿ ಜೊತೆಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಕುಮಾರಸ್ವಾಮಿ ಈಗಲೇ ಈ ರೀತಿ ಹೇಳಿಕೆ ನೀಡಬಾರದು. ಅನಿತಾಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಏನೂ ಹೇಳಿಲ್ಲ. ನಾವು ಚುನಾವಣೆಯಲ್ಲಿ ಗಂಭೀರವಾಗಿ ಸ್ಪರ್ಧೆ ಮಾಡುತ್ತಿದ್ದೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...