alex Certify ಮೈಸೂರು ದಸರಾ: ಯುವ ದಸರಾ ವೇದಿಕೆ ಬಳಿ ಸಿಲಿಂಡರ್ ಸ್ಪೋಟ; ಸ್ಟಾಲ್ ಗೆ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ದಸರಾ: ಯುವ ದಸರಾ ವೇದಿಕೆ ಬಳಿ ಸಿಲಿಂಡರ್ ಸ್ಪೋಟ; ಸ್ಟಾಲ್ ಗೆ ಬೆಂಕಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆ ಬಳಿ ಸಿಲಿಂಡರ್ ಸ್ಫೋಟವಾಗಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಕಾರ್ಯಕ್ರಮದ ವೇದಿಕೆಯ ಸಮೀಪ ಸ್ವೀಟ್ ಕಾರ್ನ್ ಸ್ಟಾಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದೆ. ಸ್ಪೋಟದಿಂದ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಸ್ವೀಟ್ ಕಾರ್ನ್ ಸ್ಟಾಲ್ ಸುಟ್ಟು ಹೋಗಿದ್ದರಿಂದ ಮಹಿಳೆ ಕಣ್ಣೀರಿಟ್ಟಿದ್ದಾರೆ. ಯುವದಸರಾ ಕಾರ್ಯಕ್ರಮದ ವೇದಿಕೆಯ ಬಳಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿದ್ದು, ನಂತರ ಕಾರ್ಯಕ್ರಮ ಮುಂದುವರೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...